UNVIERSAL News PLATFORM
Search • Browse • Read • Engage • FREE NEWS/Dating/Properties/Post/Info/ADs/Buy/Sell/Jobs etc.,

!! खास खबर / ब्रेकिंग न्यूज़ !!

* Shatranj Rating www.Shatranj.Top is doing great job for Chess Players by providing Rating, Gifts & JOB Guarantee Opportunities

* AI महाकुंभ.. मोदी देंगे दुनिया को डिजिटल मंत्र! दिल्ली ।

* पीएम बनते ही तारिक ने भारत के दुश्मन को लगाया ठिकाने!Tarique Rahman Big Action Yunus| Bangladesh

*www.KhabarOnline.Top is making wonders in NEWS Industry.


आज :1095740 - 55 - परिणाम दिवस

ADvertise HERE

← पिछे जाने के लिए

खबर / पोस्ट / जानकारी / विज्ञापन
दिनांक : 📅 1095740 - 6 - मनोरंजन दिवस |

| 2026-01-17 | 👁️ 5928 |

ನಿμÉೀಧಿತ ಚೀನಾ ಮಾಂಜಾ ದಾರದಿಂದ ಬೈಕ್ ಸವಾರ ಸಾವು:
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸಾಂತ್ವನ
===================
ಬೀದರ, ಜನವರಿ.16 (ಕರ್ನಾಟಕ ವಾರ್ತೆ):- ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಿμÉೀಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ, ರಾಷ್ಟ್ರೀಯ ಹೆದ್ದಾರಿ–65ರ ನಿರ್ಣಾ ಕ್ರಾಸ್ ಸಮೀಪ ದ್ವಿಚಕ್ರ ವಾಹನ ಸವಾರರಾದ ಸಂಜುಕುಮಾರ್ ಗುಂಡಪ್ಪ ಹೊಸಮನಿ (ನಿವಾಸಿ : ಬಂಬುಳಗಿ ಗ್ರಾಮ, ಬೀದರ್ ತಾಲ್ಲೂಕು) ಅವರು ಮಾಂಜಾ ದಾರಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಸಚಿವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವೈಯಕ್ತಿಕವಾಗಿ ಧನ ಸಹಾಯ ನೀಡಿದ್ದು, ಸರ್ಕಾರದ ಕಡೆಯಿಂದಲೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ನಿμÉೀಧಿತ ಚೀನಾ ಮಾಂಜಾ ದಾರ ಮಾನವ ಜೀವಕ್ಕೆ ಅತ್ಯಂತ ಅಪಾಯಕಾರಿ ಆಗಿದ್ದು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು. ಈ ಸಂಬಂಧ ನಿμÉೀಧಿತ ಮಾಂಜಾ ದಾರ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಸಾರ್ವಜನಿಕರು ಹೆಚ್ಚಿನ ಎಚ್ಚರ ವಹಿಸಿ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
===============
ಬೀದರ, ಜನವರಿ.16 (ಕರ್ನಾಟಕ ವಾರ್ತೆ):- 2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್. (Six Week Certificate Course, P.G. Diploma and M.S.C Sports Coaching) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಸಹಾಯಕ ನಿರ್ದೇಶಕರವರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆ ಪಡೆದು ದಿನಾಂಕ: 01-02-2026 ರೊಳಗಾಗಿ ಭರ್ತಿಮಾಡಿ ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
*****


ಸಹಾಯಕ ನಿರ್ದೇಶಕರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಬೀದರ
office: 08482-225370

खबर कि अन्य लिंक :




  

टिप्पणी (0)

Sponsored / Featured Ads

Contact for ADS
8748888103/100
Sponsored by People of Universe